ಬೆಂಗಳೂರು : ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ರಾಜ್ಯದ ಹಲವು ಕಡೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ತುಮಕೂರು, ಬಾಗಲಕೋಟೆ, ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ವಿಜಯಪುರ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬಾಗಕೋಟೆಯಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆ ಹಲವು ಕಡೆ ದಾಳಿ ನಡೆಸಲಾಗಿದೆ.