
ಬೆಂಗಳೂರು : ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದಲ್ಲಿ ಏಕಕಾಲಕ್ಕೆ 14 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಏಕಕಾಲಕ್ಕೆ ರಾಜ್ಯದ 14 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರು, ತುಮಕೂರು ಸೇರಿದಂತೆ 14 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕೆ.ಆರ್.ಪುರ ತಾಲೂಕಿನ ಸರ್ವೆ ಸೂಪರ್ ವೈಸರ್ ಕೆ.ಟಿ. ಶ್ರೀನಿವಾಸ್ ಮನೆಗಳು, ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. 5 ಕ್ಕೂ ಹೆಚ್ಚು ಕಡೆ ಅಬಕಾರಿ ಲೈಸೆನ್ಸ್ ಹೊಂದಿರುವ ಕೆ.ಟಿ.ಶ್ರೀನಿವಾಸ್ ಮೂರ್ತಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.