ಬೆಂಗಳೂರು : ಪಿಜಿ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಕೋನಪ್ಪನ ಅಗ್ರಹಾರದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಮೃತನನ್ನು 38 ವರ್ಷದ ವಿಷ್ಣು ಎಂದು ಗುರುತಿಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.