ಜೈಪುರ: ಜೈಪುರ-ಅಜ್ಮೀರ್ ಹೆದ್ದಾರಿಯ ಪೆಟ್ರೋಲ್ ಪಂಪ್ ಮುಂದೆ ಶುಕ್ರವಾರ ಬೆಳಿಗ್ಗೆ ಟ್ರಕ್ ಮತ್ತೊಂದು ಟ್ರಕ್ ಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವವಾಗಿ ದಹನಗೊಂಡಿದ್ದಾರೆ.
ಎಲ್ ಪಿಜಿ ಹಾಗೂ ಸಿಎನ್ ಜಿ ಟ್ರಕ್ದ ನಡುವೆ ಈ ಅಪಘಾತ ಸಂಭವಿಸಿದೆ. ಪೆಟ್ರೋಲ್ ಪಂಪ್ ಮುಂದೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ ಕೆಲವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಎಲ್ ಪಿಜಿ ಹಾಗೂ ಸಿಎನ್ ಜಿ ಟ್ರಕ್ಎ ನಡುವೆ ಈ ಅಪಘಾತ ಸಂಭವಿಸಿ ಇತರ ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುಟ್ಟ ಗಾಯಗಳಾಗಿರುವ ಕೆಲವರನ್ನು ಆಂಬ್ಯುಲೆನ್ಸ್ ಗಳಲ್ಲಿ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಭಂಕ್ರೋಟಾದ ಸ್ಟೇಷನ್ ಹೌಸ್ ಆಫೀಸರ್ ಮನೀಶ್ ಗುಪ್ತಾ ತಿಳಿಸಿದ್ದಾರೆ.ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿವೆ.