alex Certify BREAKING : ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ ; ಮಾಜಿ ಪ್ರಧಾನಿ ‘HDD’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ ; ಮಾಜಿ ಪ್ರಧಾನಿ ‘HDD’ ಘೋಷಣೆ

ಹಾಸನ : ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಪ್ರಧಾನಿ ದೇವೇಗೌಡ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋಲಾರಕ್ಕೆ ಬೇರೆಯವರು ಬರುವ ಚಾನ್ಸ್ ಪ್ರಶ್ನೆಯೇ ಇಲ್ಲ, ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಪ್ರಧಾನಿ ದೇವೇಗೌಡ ಘೋಷಣೆ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು.
ಸಭೆ ಬಳಿಕ ಮಾತನಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಂಡ್ಯ, ಕೋಲಾರ, ಹಾಸನ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು, ಸಂಜೆ ವೇಳೆಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗುವುದು ಎಂದರು.

ಇದೀಗ ಕೋಲಾರ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದ್ದು, ಮಂಡ್ಯ , ಹಾಸನದಲ್ಲಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬುದು ಅಧಿಕೃತವಾಗಬೇಕಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...