![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷವನ್ನೂ ಅದ್ಧೂರಿಯಾಗಿ ಸ್ವಾಗತಿಸಿದ್ದು, ಬ್ರಿಗೇಡ್ ರಸ್ತೆಯಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಅದ್ಧೂರಿಯಾಗಿ ಭರಮಾಡಿಕೊಂಡಿದ್ದಾರೆ.
ಹೊಸ ವರ್ಷದ ರಾತ್ರಿ ಬ್ರಿಗೇಡ್ ರೋಡ್ ನಲ್ಲಿ ಯುವತಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಯುವತಿಯ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಮಂಡ್ಯ ಮೂಲದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಚರ್ಚ್ ಸ್ಟೀಟ್ ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಪೊಲೀಸರೇ ಸ್ಥಳದಲ್ಲೇ ಕೆನ್ನೆಗೆ ಬಾರಿಸಿರುವ ಘಟನೆ ನಡೆದಿದೆ.