ಬೀದರ್ : ಬೀದರ್ ಜಿಲ್ಲೆಯ ಹಲವು ಕಡೆ ನಿನ್ನೆ ತಡರಾತ್ರಿ ಭೂಕಂಪ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಬೀದರ್ ತಾಲೂಕಿನ ಇಸ್ಲಾಂಪುರ ಯರನಳ್ಳಿಯಲ್ಲಿ ತೀವ್ರತೆ 1.85, ಬಸವಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ 2.6ರಷ್ಟು, ಬಸವಕಲ್ಯಾಣ ತಾಲೂಕಿನ ಯರಬಾಗನಲ್ಲಿ 3.2ರಷ್ಟು ಭೂಕಂಪದ ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಸಂಜೆ ಸುಮಾರು 7.40 ಗಂಟೆಗೆ ಭೂಕಂಪನ ಉಂಟಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಗ್ರಾಮದ ಜನರು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ.