ಬೆಂಗಳೂರು : 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ‘ಮಾಸ್ಕ್’ ಧರಿಸಬೇಕು ಸಿಎಂ ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ.
ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಅವರು ‘ಕೊರೊನಾಗೆ ಭಯ ಪಡುವ ಅಗತ್ಯವಿಲ್ಲ, ಎಲ್ಲರೂ ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ, ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ‘ಮಾಸ್ಕ್’ ಧರಿಸಬೇಕು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇಂದಿನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.