ನವದೆಹಲಿ: ದೆಹಲಿಯ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇತರ ಆರು ಜನರು ಗಾಯಗೊಂಡಿದ್ದಾರೆ.
ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ.ದೆಹಲಿ ಪೊಲೀಸರ ಪ್ರಕಾರ, ಇಂದು ಮುಂಜಾನೆ 3.35 ರ ಸುಮಾರಿಗೆ ಅವಘಡ ನಡೆದ ಬಗ್ಗೆ ಅವರಿಗೆ ಕರೆ ಬಂದಿದೆ.
ಹದಿನಾಲ್ಕು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.