ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ವರದಿಗಳ ಪ್ರಕಾರ, ಕಾರ್ಖಾನೆಯೊಳಗೆ ನಾಲ್ಕು ಬಾಯ್ಲರ್ಗಳು ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯು ಡೊಂಬಿವ್ಲಿ MIDC ಪ್ರದೇಶದ 2 ನೇ ಹಂತದಲ್ಲಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಬೆಂಕಿಯಿಂದಾಗಿ ಕಾರ್ಖಾನೆಯಲ್ಲಿ ಸಂಗ್ರಹವಾಗಿರುವ ರಾಸಾಯನಿಕಗಳು ಉರಿದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿದೆ.ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.