
ಬೆಂಗಳೂರು: ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ತಗುಲಿದೆ. ಕೆಮಿಕಲ್ ರಿಯಾಕ್ಷನ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನೋವೇಷನ್ ಸೆಂಟರ್ ಸರ್ಕಾರದ ಅಧೀನದದಲ್ಲಿದೆ. ಬಯೋ ಇನೋವೇಷನ್ ಸೆಂಟರ್ ನಲ್ಲಿ ಶೇಕಡ 70ರಷ್ಟು ಸುಟ್ಟು ಕರಕಲಾಗಿದೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.