ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ನಿಲ್ಲುವ ಹಾಗೆ ಕಾಣುತ್ತಿಲ್ಲ, ಚಿಕ್ಕಬಳ್ಳಾಪುರದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ ಜಾಲಹಳ್ಳಿಯ ಮಂಜುನಾಥ್ (34) ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಾಲಹಳ್ಳಿಯಲ್ಲಿ ಮಂಜುನಾಥ್ ಸಾಲದ ಕಾಟಕ್ಕೆ ಸಾವಿನ ಹಾದಿ ಹಿಡಿದಿದ್ದಾರೆ.
ಮಂಜುನಾಥ್ ಫೈನಾನ್ಸ್ ನಲ್ಲಿ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.