![](https://kannadadunia.com/wp-content/uploads/2020/03/madhu-bangarappa-01.jpg)
ತುಮಕೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ತುಮಕೂರು ಸಮೀಪ ಅಪಘಾತವಾಗಿರುವ ಘಟನೆ ನಡೆದಿದೆ.
ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವ ಮಧುಬಂಗಾರಪ್ಪ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ. ಬಳಿಕ ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.