ವಿಜಯಪುರ : ವಿಜಯಪುರದಲ್ಲಿ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವಿಜಯನಗರದ ಗಣಪತಿ ಚೌಕ್ ನಲ್ಲಿರುವ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದು, ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.
ಘಟನೆ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.