ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಯುವಕರು ಕಲ್ಲು ತೂರಾಟ ನಡೆಸಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.
ಕಲ್ಲು ಎಸೆದಿರುವವರು ಯಾರು ಎಂಬುದು ಗೊತ್ತಾಗಿಲ್ಲ. ಕೃತ್ಯದಿಂದ ಮನೆಯ ಕಿಟಕಿ ಗಾಜು ಪುಡಿ ಪುಡಿಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ನಡೆಯುತ್ತಿದೆ ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಟಾಧಿಕಾರಿ ವಿಕ್ರಮ್ ಆಮ್ಟೆ ಹೇಳಿದ್ದಾರೆ.