ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಪ್ರತ್ಯಕ್ಷರಾಗಿ ಕೊನೆಗೂ ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದಾರೆ.
ವಕೀಲರ ಜೊತೆ ಬಂದ ಭವಾನಿ ರೇವಣ್ಣ ಅವರು ಸಿಐಡಿ ಕಚೇರಿಯಲ್ಲಿ ನಡೆಯಲಿರುವ ಎಸ್ ಐ ಟಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿತ್ತು. 15 ದಿನಗಳಿಂದ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ತೀವ್ರ ಶೋಧ ನಡೆಸಿದ್ದು, ಸುಳಿವು ಸಿಕ್ಕಿರಲಿಲ್ಲ.ಸಂತ್ರಸ್ತೆ ಅಪಹರಣ ಪ್ರಕರಣದ ವಿಚಾರಣೆಗೆ ತನಿಖೆಗಾಗಿ ನೋಟಿಸ್ ನೀಡಿದ್ದರೂ ಭವಾನಿ ರೇವಣ್ಣ ಹಾಜರಾಗಿಲ್ಲ. ತನಿಖೆಗೆ ಅಸಹಕಾರ ತೋರಿದ ಕಾರಣಕ್ಕೆ ಅರೆಸ್ಟ್ ವಾರಂಟ್ ಜಾರಿ ಮಾಡುವಂತೆ ನ್ಯಾಯಾಲಯಕ್ಕೆ ಎಸ್ಐಟಿ ಮನವಿ ಮಾಡಿದ್ದು, ಮನವಿ ಪುರಸ್ಕರಿಸಿದ ಕೋರ್ಟ್ ಭವಾನಿ ರೇವಣ್ಣ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು.
ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು, ಮಧ್ಯಾಹ್ನ 1 ಗಂಟೆಯೊಳಗೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿತ್ತು. ಹಾಗೂ ಭವಾನಿ ರೇವಣ್ಣಗೆ ಹಾಸನ ಜಿಲ್ಲೆಗೆ ಹಾಗೂ ಕೆ.ಆರ್.ನಗರ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿತ್ತು.