ನವದೆಹಲಿ : ಚುನಾವಣಾ ಬಾಂಡ್ ಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರೊಳಗೆ ಚುನಾವಣಾ ಬಾಂಡ್ ಸಂಖ್ಯೆಗಳ ವಿವರ ಸಲ್ಲಿಸುವಂತೆ ಎಸ್ ಬಿ ಐಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಮಾರ್ಚ್ 21ರ ಸಂಜೆ 5 ಗಂಟೆಯೊಳಗೆ ಚುನಾವಣಾ ಬಾಂಡ್ ಸಂಖ್ಯೆಗಳ ವಿವರ ಸಲ್ಲಿಸುವಂತೆ ಎಸ್ ಬಿ ಐಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಚುನಾವಣಾ ಬಾಂಡ್ ಗಳ “ವಿಶಿಷ್ಟ ಸರಣಿ ಸಂಖ್ಯೆಗಳನ್ನು” ಬಹಿರಂಗಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸುತ್ತಿದೆ.ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಎಸ್ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ. ನಿಮ್ಮ ಬಳಿ ಇರುವ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸಬೇಕೆಂದು ನಾವು ಬಯಸುತ್ತೇವೆ” ಎಂದು ಸಿಜೆಐ ಹೇಳಿದರು.
ಎಸ್ ಬಿ ಐ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಚುನಾವಣಾ ಬಾಂಡ್ ಗಳ ಸಂಖ್ಯೆಯನ್ನು ನೀಡಬೇಕಾದರೆ, ಅವರು ಅದನ್ನು ನೀಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದರು. ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಎಸ್ಬಿಐಗೆ ಸಿಜೆಐ ಸೂಚನೆ ನೀಡಿದ್ದಾರೆ.