ಮಂಡ್ಯ : ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ
ಮಂಡ್ಯದ ರಾಗಿ ಮುದ್ದನಹಳ್ಳಿ ಗೇಟ್ ಬಳಿ ನಡೆದಿದೆ.
ಬಸ್ ನಲ್ಲಿ 30 ಕ್ಕೂ ಹೆಚ್ಚು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬೆಂಗಳೂರಿನಿಂದ ಮೈಸೂರು ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಬಸ್ ಗುಂಡಿಗೆ ನುಗ್ಗಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ರಕ್ಷಣೆಗೆ ಬಂದ ಸ್ಥಳೀಯರು ಪ್ರಯಾಣಿಕರನ್ನು ಬಸ್ ನಿಂದ ಹೊರಗೆ ಕರೆತಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.