ಏರ್ ಇಂಡಿಯಾ ಮತ್ತು ಇಂಡಿಗೊ ಢಾಕಾಗೆ ವಿಶೇಷ ವಿಮಾನಗಳನ್ನು ಕಳುಹಿಸಿದ್ದು, 400 ಹೆಚ್ಚು ಭಾರತೀಯರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಲಾಗಿದೆ.
ಬಾಂಗ್ಲಾದೇಶದ ರಾಜಧಾನಿಯಲ್ಲಿ ಅಸ್ಥಿರ ಪರಿಸ್ಥಿತಿಯ ಮಧ್ಯೆ 400 ಕ್ಕೂ ಹೆಚ್ಚು ಜನರನ್ನು ಕರೆತಂದಿವೆ. ಏರ್ ಇಂಡಿಯಾದ ವಿಶೇಷ ವಿಮಾನವು ಬುಧವಾರ (ಆಗಸ್ಟ್ 7, 2024) ಢಾಕಾದಿಂದ ನವದೆಹಲಿಗೆ 6 ಶಿಶುಗಳು ಸೇರಿದಂತೆ 205 ಜನರನ್ನು ಕರೆತಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ವಾರಗಳ ಹಿಂಸಾತ್ಮಕ ಪ್ರತಿಭಟನೆಯ ನಂತರ ಹಠಾತ್ತನೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಒಂದು ದಿನದ ನಂತರ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಸಂಸತ್ತನ್ನು ವಿಸರ್ಜಿಸಿ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ.
ಶೇಖ್ ಹಸೀನಾ ಸದ್ಯ ಭಾರತದಲ್ಲಿ “ಸುರಕ್ಷಿತ ಸ್ಥಳದಲ್ಲಿ” ಆಶ್ರಯ ಪಡೆದಿದ್ದಾರೆ, ಆದರೆ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಂಡಿದೆ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನುಸ್ ನೇತೃತ್ವ ವಹಿಸಿದ್ದಾರೆ.