ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ.
ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದಂತೆ ಮುಂಬೈನಾದ್ಯಂತ 50 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ. ವಿಪಿಎನ್ ನೆಟ್ವರ್ಕ್ ಬಳಸಿ ಬೆದರಿಕೆ ಇಮೇಲ್ಗಳನ್ನು ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ದೃಢಪಡಿಸಿದ್ದಾರೆ. ಕಳುಹಿಸುವವರ ಗುರುತು ಮತ್ತು ಬೆದರಿಕೆಯ ಉದ್ದೇಶವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಹಿಂದೂಜಾ ಕಾಲೇಜ್ ಆಫ್ ಕಾಮರ್ಸ್ ಅನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಹುಸಿ ಇಮೇಲ್ ಕೂಡ ಸಂಸ್ಥೆಗೆ ಬಂದಿದೆ ಎಂದು ವರದಿ ತಿಳಿಸಿದೆ. “ಸ್ಥಳೀಯ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ತಲುಪಿ ತನಿಖೆಯನ್ನು ಪ್ರಾರಂಭಿಸಿದ್ದಾರೆ.