alex Certify BREAKING : ಬೀದರ್ ನಲ್ಲಿ ‘ಒಗ್ಗರಣೆ ಅನ್ನ’ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೀದರ್ ನಲ್ಲಿ ‘ಒಗ್ಗರಣೆ ಅನ್ನ’ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ಬೀದರ್ : ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೀದರ್ ಜಿಲ್ಲೆ ಹುಮನಾಬಾದ್ ನಲ್ಲಿ ನಡೆದಿದೆ.

ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50 ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ರಾತ್ರಿ ಉಳಿದ ಅನ್ನಕ್ಕೆ ಇಂದು ಒಗ್ಗರಣೆ ನೀಡಿ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ  ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಎಂಎಲ್ ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...