ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹವಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ತಾಯಿ, ಮಗು ಸಜೀವ ದಹನವಾಗಿದ್ದಾರೆ. ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.