ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮೀಪ ಇರುವ ಸೂಳೆಕೆರೆಯಲ್ಲಿ ಮಗುವಿನಿಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸೂಳೆಕೆರೆಯಲ್ಲಿ 5 ವರ್ಷದ ಮಗುವಿನಿಂದ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮೃತ ತಾಯಿ ಮಗಳನ್ನು ಹೊನ್ನೆಬಾಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಹೊನ್ನೆಬಾಗಿ ಗ್ರಾಮದ ಕವಿತಾ (27) ಹಾಗೂ ಪುತ್ರಿ ನಿಹಾರಿಕ (5) ಮೃತಪಟ್ಟಿದ್ದಾರೆ.
ಕಳೆದ ಶುಕ್ರವಾರ ಕವಿತಾ ಹಾಗೂ ಪುತ್ರಿ ನಿಹಾರಿಕ ಕಳೆದ ಶುಕ್ರವಾರದಿಂದ ಕಾಣೆಯಾಗಿರು. ಪತಿ ಮಂಜುನಾಥ್ ನಿಂದ ನಿರಂತರ ವರದಕ್ಷಿಣೆ ಕಿರುಕುಳದಿಂದ ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.