ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಗನ ಸಾವಿನಿಂದ ಮನನೊಂದು ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿರಸಿ ತಾಲೂಕಿನ ತಾರಾಗೋಡು ಬೆಳಲೆ ಗ್ರಾಮದ ಉದಯ್ ಬಾಲಚಂದ್ರ ಹೆಗಡೆ ಅನಾರೋಗ್ಯದ ಮೃತಪಟ್ಟಿದ್ದು, ಉದಯ್ ಸಾವಿನಿಂದ ಮನನೊಂದು ಉದಯ್ ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯ (25) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊರೊನಾ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಚಂದ್ರ ಹೆಗಡೆಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದು, ಮನೆ ಮಗನ ಸಾವಿನಿಂದ ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನ ಅಂತ್ಯಕ್ರಿಯೆ ಬಳಿಕ ಸಮಾಧಿ ಬಳಿಕ ಕಣ್ಣೀರು ಹಾಕಿದ್ದಾರೆ. ಸ್ವಲ್ಪ ಸಮಯದ ನಂತರ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.