ನವದೆಹಲಿ : ಆಮ್ ಆದ್ಮಿ ಪಕ್ಷವು ಎಎಪಿ ರಾಜ್ಯಸಭಾ ನಾಯಕರಾಗಿ ಸಂಸದ ರಾಘವ್ ಚಡ್ಡಾ ರನ್ನು ನೇಮಿಸಿದೆ.
ಸಂಜಯ್ ಸಿಂಗ್ ಅವರ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕರಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಸಭಾ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ಎಎಪಿ ಪಕ್ಷದ ನಾಯಕತ್ವವು ಸಂಜಯ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ, ರಾಘವ್ ಚಡ್ಡಾ ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಿರಲಿದ್ದಾರೆ ಎಂದು ಹೇಳಿದೆ.
ಚಡ್ಡಾ ಅವರನ್ನು ಸದನದ ನಾಯಕರನ್ನಾಗಿ ನೇಮಿಸುವ ಬಗ್ಗೆ ಎಎಪಿಯಿಂದ ಪತ್ರ ಬಂದಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ದೃಢಪಡಿಸಿವೆ. ಪತ್ರದ ಅನುಷ್ಠಾನಕ್ಕಾಗಿ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಬಳಿ ಇದೆ.ಚಡ್ಡಾ ಅವರು ರಾಜ್ಯಸಭೆಯ ಅತ್ಯಂತ ಕಿರಿಯ ಸದಸ್ಯರಲ್ಲಿ ಒಬ್ಬರು. ಎಎಪಿ ಪ್ರಸ್ತುತ ಮೇಲ್ಮನೆಯಲ್ಲಿ ಒಟ್ಟು 10 ಸಂಸದರನ್ನು ಹೊಂದಿದೆ.ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ಅತಿದೊಡ್ಡ ಬಲವನ್ನು ಹೊಂದಿದೆ.