ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿದ್ದ ಸ್ನೇಹಮಯಿ ಕೃಷ್ಣ ಅವರ ಅರ್ಜಿ ವಿಚಾರಣೆಯನ್ನು ಡಿ.10 ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಎಂ ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ ತಪ್ಪುತ್ತಿಲ್ಲ, ಲೋಕಾಯಕ್ತ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆಸಿರುವ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು.