ಬೆಂಗಳೂರು : ಮುಡಾ ಹಗರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಇಡಿ ನೋಟಿಸ್ ನೀಡಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ (ಜಾರಿ ನಿರ್ದೇಶನಾಲಯ)ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದರೆ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಕರೆದಿದೆ.