alex Certify BREAKING : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ  ಖಾಸಗಿ ದೂರು ದಾಖಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ದೂರು ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ. ಸ್ನೇಹಮಯಿ ಕೃಷ್ಣ ಎಂಬುವರು ದೂರು ನೀಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಾಳೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು.ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ಹಾಗೂ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಡಾಗೆ ವಂಚಿಸಿದ್ದಾರೆ ಎಂದು ದೂರಿದ್ದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...