ಬೆಂಗಳೂರು : ಮುಡಾ ಹಗರಣದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿದೆ.
ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಅವರ ಹೆಬ್ಬಾಳದ ನಿವಾಸಕ್ಕೆ ತೆರಳಿದ್ದಂತಹ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನವರಾತ್ರಿ ಬಳಿಕ ವಿಚಾರಣೆ ಬಳಿಕ ಬರುವುದಾಗಿ ಭೈರತಿ ಸುರೇಶ್ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಸಚಿವ ಭೈರತಿ ಸುರೇಶ್ ಗೂ ಸಂಕಷ್ಟ ಎದುರಾಗಿದೆ.