ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ.
ಇಂದು ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ನನಗೆ ಮತ್ತೆ ಬರಲು ಹೇಳಿಲ್ಲ ಎಂದಿದ್ದರು. ಆದರೆ ಇದೀಗ ಮತ್ತೆ ಕರೆದರೆ ವಿಚಾರಣೆಗೆ ಬರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಲಭ್ಯವಿರುವ ಮಾಹಿತಿಗಳ ಪ್ರಕಾರ ಸುಮಾರು 30-35 ಪ್ರಶ್ನೆಗಳನ್ನು ಕೇಳಲಾಗಿದ್ದು, ಅದರಲ್ಲಿ ಕೆಲವೊಂದಕ್ಕೆ ನನಗೇನು ಗೊತ್ತಿಲ್ಲ ಎಂದು ಸಿಎಂ ಉತ್ತರಿಸಿದ್ದಾರೆ ಎನ್ನಲಾಗಿದೆ. ನಾನು ಮತ್ತು ನನ್ನ ಕುಟುಂಬ ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ, ಮುಂದೆಯೇ ಕಾನೂನು ಪ್ರಕಾರವೇ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.
ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ, ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದರು.ಲೋಕಾಯುಕ್ತ ವಿಚಾರಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘’ಹೌದು ನಾನು ಲೋಕಾಯುಕ್ತ ವಿಚಾರಣೆ ಎದುರಿಸಿದೆ. ಪ್ರಶ್ನೆಗಳನ್ನು ಕೇಳಿದ್ದಾರೆ. ಅದಕ್ಕೆ ಉತ್ತರ ಕೂಡ ನೀಡಿದ್ದೇನೆ ಎಂದರು. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ , ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ ಎಂದಿದ್ದರು.