ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಎ3 ಆರೋಪಿ ಹಾಗೂ ಎ4 ಆರೋಪಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಎ 3 ಮಲ್ಲಿಕಾರ್ಜುನ, ಎ4 ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
‘ ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ-1, ಪತ್ನಿ ಪಾರ್ವತಿ ಎ-2 ಎಂದು ಹೆಸರಿಸಲಾಗಿದೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಕಳೆದ ಕೆಲವು ವಾರಗಳ ಹಿಂದೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿತ್ತು.. ಖಾಸಗಿ ದೂರಿನಲ್ಲಿ ಉಲ್ಲೇಖಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.