ಬೆಂಗಳೂರು : ಪ್ರಾಸಿಕ್ಯೂಷನ್ ವಿಚಾರವಾಗಿ ಕಾನೂನು ಹೋರಾಟ ನಡೆಸಲು ಸಿಎಂ ಸಿದ್ದರಾಮಯ್ಯ ಆ.22 ರಂದು ಇಂದು ಕಾಂಗ್ರೆಸ್ ಶಾಸಕಾಂಗದ ಪಕ್ಷದ ಸಭೆ ಕರೆದಿದ್ದಾರೆ.
ಆ.22 ರಂದು ಸಂಜೆ ಗಂಟೆಗೆ ವಿಧಾನಸೌಧದ 3 ನೇ ಮಹಡಿಯಲ್ಲಿ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ , ಸಚಿವರು, ಶಾಸಕರು ಹಾಜರಿರಲಿದ್ದಾರೆ.
ಮುಡಾ ವಿಚಾರದಲ್ಲಿ ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು, ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು? ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.