ಬೆಂಗಳೂರು : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈಯ್ಯುವ ಜೊತೆಗೆ ಸಾಹಿತ್ಯ, ಪ್ರಬಂಧ, ವಿಮರ್ಶೆ, ಅನುವಾದ, ಕಾವ್ಯ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರು. ಪಂಚಾಕ್ಷರಿ ಅವರ ಅಗಲಿಕೆಯಿಂದ ನಾಡಿನ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.