alex Certify BREAKING : ರಾಯಚೂರಿನಲ್ಲಿ ‘ಮಟನ್ ಊಟ’ ಸೇವನೆ ಕೇಸ್ : ಮತ್ತೋರ್ವ ಮಹಿಳೆ ಸಾವು, ಮೃತರ ಸಂಖ್ಯೆ 5 ಕ್ಕೇರಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಯಚೂರಿನಲ್ಲಿ ‘ಮಟನ್ ಊಟ’ ಸೇವನೆ ಕೇಸ್ : ಮತ್ತೋರ್ವ ಮಹಿಳೆ ಸಾವು, ಮೃತರ ಸಂಖ್ಯೆ 5 ಕ್ಕೇರಿಕೆ..!

ರಾಯಚೂರು: ರಾಯಚೂರಿನಲ್ಲಿ ಮಟನ್ ಊಟ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ.

ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿತ್ತು. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಭೀಮಣ್ಣ(60), ಈರಮ್ಮ (54), ಮಲ್ಲೇಶ್ (19) ಹಾಗೂ ಪಾರ್ವತಿ (17) ಮೃತಪಟ್ಟಿದ್ದರು. ಇದೀಗ ಮತ್ತೋರ್ವ ಮಹಿಳೆ ಮಲ್ಲಮ್ಮ (22) ಮೃತಪಟ್ಟಿದ್ದು, ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ.s

ಮಟನ್ ಊಟ ಸೇವಿಸಿ ಅಸ್ವಸ್ಥಗೊಂಡವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಟನ್ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪುಡ್ ಪಾಯ್ಸಸ್ ನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...