ರಾಯಚೂರು : ರಾಯಚೂರಿನಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ರಾಯಚೂರಿನ ಮಾನ್ವಿ ಸೇರಿದಂತೆ ಹಲವು ಕಡೆ ಹಕ್ಕಿಗಳು ಸಾವನ್ನಪ್ಪುತ್ತಿದೆ. ಕಾಗೆ, ಪಾರಿವಾಳ ಸೇರಿದಂತೆ ಹಲವು ಪಕ್ಷಿಗಳು ಸಾವನ್ನಪ್ಪುತ್ತಿದೆ.
ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ರಾಯಚೂರಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಪಕ್ಷಿಗಳಿಗೆ ನೀರು ಕೊಟ್ಟರೂ ಕೂಡ ಪಕ್ಷಿಗಳು ನೀರು ಕುಡಿಯುತ್ತಿಲ್ಲ.ಎಂದು ಜನರು ಹೇಳುತ್ತಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲ್ಯಾಬ್ ವರದಿ ಬಂದ ಬಳಿಕ ಪಕ್ಷಿಗಳ ಸಾವಿಗೆ ಕಾರಣ ತಿಳಿದು ಬರಲಿದೆ.