ನವದೆಹಲಿ: ವೈದ್ಯಕೀಯ ಪ್ರವೇಶಕ್ಕಾಗಿ ದೇಶಾದ್ಯಂತ ನಡೆಸುವ ನೀಟ್ ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ 18 ರಿಂದ ಪರೀಕ್ಷೆ ನಡೆಯಬೇಕಿತ್ತು.
ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ನೀಟ್ ಪರೀಕ್ಷೆ ಮುಂದೂಡಲು ತೀರ್ಮಾನಿಸಲಾಗಿದೆ. ದೇಶಾದ್ಯಂತ ಕೊರೋನಾ ಸೋಂಕು ಭಾರೀ ಹೆಚ್ಚಳವಾದ ಕಾರಣ ಪರೀಕ್ಷೆ ಮುಂದೂಡಲಾಗಿದೆ.
ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಸಚಿವ ಡಾ.ಹರ್ಷ್ ವರ್ಧನ್ ಗುರುವಾರ ಟ್ವೀಟ್ ಮಾಡಿದ್ದಾರೆ. ಪರೀಕ್ಷೆ ಏಪ್ರಿಲ್ 18 ರಂದು ನಡೆಯಬೇಕಿತ್ತು.