ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ನಿನ್ನೆ ಡ್ರಿಂಕ್ & ಡ್ರೈವ್ ತಪಾಸಣೆ ನಡೆಸಲಾಗಿದ್ದು, ನಿನ್ನೆ ರಾತ್ರಿ 513 ಡ್ರಿಂಕ್ & ಡ್ರೈವ್ ಕೇಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ 28 ಸಾವಿರಕ್ಕೂ ಹೆಚ್ಚು ವಾಹನ ತಪಾಸಣೆ ನಡೆಸಲಾಗಿದ್ದು, 513 ಡ್ರಿಂಕ್ & ಡ್ರೈವ್ ಕೇಸ್ ದಾಖಲಾಗಿದೆ. ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಕೇಸ್ ದಾಖಲಾಗಿದೆ.
ಹೊಸ ವರ್ಷಕ್ಕೆ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ
ಹೊಸ ವರ್ಷಕ್ಕೆ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಬಂದಿದ್ದು, ನಿನ್ನೆ ರಾಜ್ಯದಲ್ಲಿ ಭರ್ಜರಿ 308 ಕೋಟಿ ಮದ್ಯ ಮಾರಾಟವಾಗಿದೆ.ಡಿ.31 ರ ಮಂಗಳವಾರ ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೇವಲ ಅರ್ಧ ದಿನದ ಅವಧಿಯಲ್ಲಿ ಬರೋಬ್ಬರಿ 308 ಕೋಟಿ ರೂ ಮದ್ಯ ಮಾರಾಟವಾಗಿದೆ. ಈ ಮೂಲಕ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಹರಿದು ಬಂದಿದೆ.
2024 ರ ಡಿಸೆಂಬರ್ 31 ರಂದು 7305 ಮದ್ಯ ಮಾರಾಟಗಾರರು ಕೆಎಸ್ ಬಿಸಿಎಲ್ ನಿಂದ ಮದ್ಯ ಖರೀದಿಸಿದ್ದಾರೆ.
2023 ರ ಡಿಸೆಂಬರ್ 31 ರಂದು 193 ಕೋಟಿ ಮದ್ಯ ಮಾರಾಟ ಆಗಿತ್ತು. ನಿನ್ನೆ ರಾಜ್ಯದಲ್ಲಿ ಭರ್ಜರಿ 308 ಕೋಟಿ ಮದ್ಯ ಮಾರಾಟವಾಗಿದೆ.