ಬೆಳಗಾವಿ ಜಿಲ್ಲೆಯ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಈಗ ರಾಮದುರ್ಗಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ.
ಪಟ್ಟಣದ ಹೊರವಲಯದ ಥೇರ್ ಬಜಾರ್ ನ ನಾಲ್ಕಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನದಿ ತೀರದ ಜನತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು, ಅಧಿಕಾರಿಗಳು ಗಮನಹರಿಸುವಂತೆ ಆಗ್ರಹಿಸಿದ್ದಾರೆ.