ಇಂಡೋನೇಷ್ಯಾದ ಮುಖ್ಯ ದ್ವೀಪವಾದ ಜಾವಾದಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಗಾಯಗೊಂಡಿದ್ದಾರೆ.
ಪ್ರಬಲ ಭೂಕಂಪದಿಂದ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡು ಗಾಯಗೊಂಡವರು ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ಮಾಹಿತಿ ನೀಡಿದ್ದಾರೆ.