ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ.
ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ನಡುವೆಯೇ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಸೋಂಕಿತ ವಿದ್ಯಾರ್ಥಿಗಳೆಲ್ಲರೂ 2 ಡೋಸ್ ಲಸಿಕೆ ಪಡೆದವರಾಗಿದ್ದಾರೆ ಎಂದು ತಿಳಿದು ಬಂದಿದೆ.
BIG NEWS: ಕಾಂಗ್ರೆಸ್ ಹೊಣೆಗಾರಿಕೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆಯೇ ಹರಿಹಾಯ್ದ ರಾಹುಲ್ ಗಾಂಧಿ
ಸೋಂಕಿತರನ್ನು ಹಾಸ್ಟೆಲ್ ನಲ್ಲಿಯೇ ಐಸೋಲೇಷನ್ ಮಾಡಲಾಗಿದ್ದು, ಇಡೀ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳ ಸ್ಯಾಂಪಲ್ ನ್ನು ಜೆನೊಮ್ ಸಿಕ್ವೆನ್ಸಿಗೆ ಕಳುಹಿಸಲಾಗಿದೆ ಎಂದು ಬಿಎಂಸಿ ತಿಳಿಸಿದೆ.