ಕಲಬುರ್ಗಿ: ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಯಪ್ಪ (70) ಕಲುಷಿತ ನೀರಿನಿಂದ ಸಾವನ್ನಪ್ಪಿದವರು. ಜೇವರ್ಗಿ ತಾಲೂಕಿನ ಮಂದೇವಾಲದಲ್ಲಿ ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ರಾತ್ರಿಯಿಂದ ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.
ಅಸ್ವಸ್ಥರನ್ನು ಜೇವರ್ಗಿ ಹಾಗೂ ಕಲಬುರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.