alex Certify BREAKING NEWS: ಕಾಲು ಜಾರಿ ಜಲಪಾತಕ್ಕೆ ಬಿದ್ದ ನಾಲ್ವರು ಯುವತಿಯರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಲು ಜಾರಿ ಜಲಪಾತಕ್ಕೆ ಬಿದ್ದ ನಾಲ್ವರು ಯುವತಿಯರ ದುರ್ಮರಣ

ಬೆಳಗಾವಿ: ಕಿತವಾಡ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಕಿತವಾಡ ಫಾಲ್ಸ್ ನಲ್ಲಿ ಈ ದುರಂತ ಸಂಭವಿಸಿದೆ. ಜಲಪಾತ ವೀಕ್ಷಣೆಗೆ ತೆರಳಿದ್ದ ಐವರು ಯುವತಿಯರಲ್ಲಿ ನಾಲ್ವರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿಯಿಂದ ಕಿತವಾಡ ಫಾಲ್ಸ್ ಗೆ 40 ಯುವತಿಯರು ಟ್ರಿಪ್ ಗೆ ತೆರಳಿದ್ದರು. ಫಾಲ್ಸ್ ಬಳಿ ಸೆಲ್ಫಿ ತೆಗೆಯಲು ಹೋಗಿ ಐವರು ಯುವತಿಯರು ಜಾರಿ ಬಿದ್ದಿದ್ದಾರೆ. ಅವರಲ್ಲಿ ನಾಲ್ವರು ನೀರುಪಾಲಾಗಿ ಸಾವನ್ನಪ್ಪಿದ್ದಾರೆ. ಆಸಿಯಾ ಮುಜಾವರ್(17), ಕುದ್ ಶಿಯಾ ಹಾಸಂ ಪಟೇಲ್(20), ರುಕ್ಕಶಾರ್ ಭಿಸ್ತಿ (20), ತಸ್ಮಿಯಾ (20) ಮೃತ ಯುವತಿಯರು ಎಂದು ತಿಳಿದುಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...