ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ವ್ಯಾಪಕವಾಗಿ ಚರ್ಚೆಗೆ ಬರುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚನಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರಿನಲ್ಲಿ ಸಿದ್ದರಾಮಯ್ಯ ನಿವಾಸದಲ್ಲಿ ನಾಯಕರು ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯ, ನಾಯಕತ್ವ ಬದಲಾವಣೆ ಪರಿಣಾಮ ಹಾಗೂ ಮುಂದಿನ ನಡೆ ಬಗ್ಗೆ ಕಾಂಗ್ರೆಸ್ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಇವುಗಳ ಮೇಲೂ ಪರಿಣಾಮ ಬೀರಿದೆ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ
ನಾಯಕತ್ವ ಬದಲಾವಣೆ ಚರ್ಚೆ, ಸಿಎಂ ಬಿಎಸ್ ವೈ ಅವರ ’ವರಿಷ್ಠರು ಸೂಚಿಸಿದರೆ ರಾಜೀನಾಮೆ” ಎಂಬ ಹೇಳಿಕೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕರ ಸಭೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.