ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ನರೇಂದ್ರ ಮೋದಿ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನ ಟರ್ಮಿನಲ್ -2 ಉದ್ಘಾಟನೆ ಬಳಿಕ ಪ್ರಧಾನಿ ಮೋದಿಯವರು ಏರ್ ಪೋರ್ಟ್ ಬಳಿ ನಿರ್ಮಾಣಗೊಂಡಿರುವ ಥೀಮ್ ಪಾರ್ಕ್ ಹಾಗೂ 108 ಅಡಿ ಎತ್ತರದ ಕೆಂಪೇಗೌಡರ ಬೃಹತ್ ಕಂಚಿನ ಪ್ರಗತಿಯ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಈ ಪ್ರತಿಮೆ 64 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಇಲ್ಲಿನ ಥೀಮ್ ಪಾರ್ಕ್ 20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಒಟ್ಟು 84 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.
ಕೆಂಪೇಗೌಡರ ಪ್ರತಿಮೆಯ ತೂಕ 218 ಟನ್ ಇದ್ದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ಪ್ರತಿಮೆಗೆ ಅಳವಡಿಸಿರುವ ಖಡ್ಗದ ತೂಕ 4ವೇ ಟನ್ . ಒಟ್ಟು 23 ಎಕರೆ ವಿಸ್ತೀರ್ಣದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣಗೊಂಡಿದೆ.