alex Certify BREAKING NEWS: ಕೊರೊನಾ ಸೊಂಕಿಗೆ ಬಲಿಯಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೊರೊನಾ ಸೊಂಕಿಗೆ ಬಲಿಯಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಖ್ಯಾತ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತಿದ್ದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ದಲಿತ ಧ್ವನಿ ಎಂದೇ ಪ್ರಸಿದ್ಧಿ ಪಡೆದಿದ್ದ ಸಿದ್ದಲಿಂಗಯ್ಯ ಹಲವು ಹೋರಾಟ, ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ನಾಟಕ, ಪ್ರಬಂಧ, ವಿಮರ್ಷೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆಯಲ್ಲಿ 1954ರಲ್ಲಿ ಸಿದ್ದಲಿಂಗಯ್ಯ ಜನಿಸಿದ್ದರು. ತಂದೆ ದೇವಯ್ಯ, ತಾಯಿ ವೆಂಕಮ್ಮ.
ವಿದ್ಯಾರ್ಥಿ ದಿಸೆಯಲ್ಲಿಯೇ ಉತ್ತಮ ಭಾಷಣಕಾರರಾಗಿ ಗಮನ ಸೆಳೆದಿದ್ದರು.

ಗ್ರಾಮ ದೇವತೆಗಳು ಸಿದ್ದಲಿಂಗಯ್ಯ ಅವರ ಪಿ ಹೆಚ್ ಡಿ ಸಂಶೋಧನಾ ಪ್ರಬಂಧ. ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು ಮೊದಲಾದವು ಅವರ ಪ್ರಮುಖ ಕವನ ಸಂಕಲನಗಳಾಗಿದ್ದು, ಹಕ್ಕಿ ನೋಟ, ರಸಗಳಿಗೆಗಳು, ಎಡಬಲ, ಉರಿಕಂಡಾಯ ವಿಮರ್ಶಾ ಕೃತಿಗಳಾಗಿವೆ. ಏಕಲವ್ಯ, ಪಂಚಮ ಪ್ರಮುಖ ನಾಟಕ ಹಾಗೂ ಅವತಾರಗಳು, ಸದನದಲ್ಲಿ ಸಿದ್ದಲಿಂಗಯ್ಯ ಅವರ ಪ್ರಮುಖ ಲೇಖನ ಸಂಕಲನಗಳಾಗಿವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...