ನವದೆಹಲಿ: ದೇಶದಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ ಕಂಡಿದೆ, ಕಳೆದ 24 ಗಂಟೆಯಲ್ಲಿ 4,272 ಜನರಲ್ಲಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,611 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 40,750 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,13,999 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 21,63,248 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,17,94,748 ಡೋಸ್ ಲಸಿಕೆ ಹಾಕಲಾಗಿದೆ.