ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,615 ಜನರಲ್ಲಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,584 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 40,979 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,09,525 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 13,87,533 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,17,96,31,500 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,23,293 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.