ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ರಿಕವರಿ ರೇಟ್ 97.31%ಗೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 38,079 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ 560 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 413091ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,24,025 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 97.31%ಗೆ ಏರಿಕೆಯಾಗಿದೆ. 24 ಗಂಟೆಯಲ್ಲಿ 40,026 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30227792 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 19,98,715 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಕಳೆದ 24ಗಂಟೆಯಲ್ಲಿ 42,12,557 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 39,96,95,879 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.