ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. .
ಇದೇ ವೇಳೆ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಕ್ಕೆ ಟೀಕಿಸಿರುವ ಸಿ.ಎಂ. ಇಬ್ರಾಹಿಂ, ಯು.ಟಿ ಖಾದರ್ ಅವರನ್ನು ಡಿಸಿಎಂ ಮಾಡಬಹುದಿತ್ತಲ್ಲ. ಅವರನ್ನು ಸ್ಪೀಕರ್ ಮಾಡಿದ್ದಾರೆ. ಈಗ ಅವರು ಎದ್ದೇಳಂಗು ಇಲ್ಲ, ಮಾತನಾಡಂಗೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.