ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ನ್ನು ನ್ಯಾಯಾಲಯ ತಿರಸ್ಕರಿಸಿದೆ.
ಡಿನೋಟೀಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಡಿವೈಎಸ್ಪಿಗೆ ನ್ಯಾಯಾಲಯ ಸೂಚನೆ ನೀಡಿದೆ. ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶ ನೀಡಿದೆ.
ಈ ಮೂಲಕ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ವೈ ವಿರುದ್ಧ ತನಿಖೆ ಮುಂದುವರೆಯಲಿದ್ದು, ಮತ್ತೆ ಸಂಕಷ್ಟ ಎದುರಾಗಿದೆ.